ಹಾಸ್ಯ ನಟ ಬುಲೆಟ್ ಪ್ರಕಾಶ ಸಾವಿನ ವಂದತಿ: ನಟ ದುನಿಯಾ ವಿಜಿ ಸ್ಪಷ್ಟನೆ

530

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶರವರ ಆರೋಗ್ಯದಲ್ಲಿ ಗಂಭೀರತೆ ಕಂಡು ಬಂದ ಹಿನ್ನೆಲೆಲ್ಲಿ ಅವರನ್ನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆಯೇ ಕಿಡಿಗೇಡಿಗಳು ಅವರು ಸಾವನ್ನಪ್ಪಿದ್ದಾರೆ ಅನ್ನೋ ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ವೆಂಟಿಲೇಟರ್ ನಲ್ಲಿದ್ದಾರೆ ಎಂದು ನಟ ದುನಿಯಾ ವಿಜಿ ಸ್ಪಷ್ಟಪಡಿಸಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಕಾಮಿಡಿ ನಟ ಬುಲೆಟ್ ಪ್ರಕಾಶ ಗುಣಮುಖರಾಗಲಿ ಎಂದು ಎಲ್ಲರೂ ಕೇಳಿಕೊಳ್ತಿದ್ದಾರೆ. ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸೂಕ್ತ ಕ್ರಮಗಳನ್ನ ತೆಗೆದುಕೊಳ್ಳಬೇಕಿದೆ.




Leave a Reply

Your email address will not be published. Required fields are marked *

error: Content is protected !!