ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಅನ್ನೋ ಹೇಳಿಕೆ ನೀಡಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ವಿರುದ್ಧ ದೂರು ದಾಖಲಿಸಲಾಗಿದೆ. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.
ನಟ ಚೇತನ್ ಹೇಳಿಕೆಯಿಂದ ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.