ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದೂರು

204

ಪ್ರಜಾಸ್ತ್ರ ಸುದ್ದಿ

ಮೈಸೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಹಂಚಿಕೆ ಹೇಳಿಕೆ ನೀಡಿರುವ ಮಾಜಿ ಶಾಸಕ, ವರುಣಾ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಆಗಿರುವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.

ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಘಟಕದ ವತಿಯಿಂದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ. ಈ ಎ.ಎನ್ ರಂಗು, ಭಾಸ್ಕರ್ ರಾವ್ ಸೇರಿ ಇತರರು ಹಾಜರಿದ್ದರು.

ಈ ವೇಳೆ ಮಾತನಾಡಿದ ಭಾಸ್ಕರ್ ರಾವ್, ತಂದೆಯ ಗೆಲುವಿಗೆ ಅನುಕೂಲವಾಗಲಿ ಎಂದು ಕುಕ್ಕರ್, ಇಸ್ತ್ರಿ ಪೆಟ್ಟಿಗೆ ನೀಡಲಾಗಿದೆ ಎನ್ನುವ ಯತೀಂದ್ರ ಹೇಳಿಕೆ ಸಂಬಂಧ ಸಮಗ್ರ ತನಿಖೆಯಾಗಬೇಕು. ಜನರಿಗೆ ಆಮಿಷ ತೋರಿಸುವುದು ಅಪರಾಧ ಎಂದು ಹೇಳಿದರು.




Leave a Reply

Your email address will not be published. Required fields are marked *

error: Content is protected !!