ಖ್ಯಾತ ಗಾಯಕ ಬಪ್ಪಿ ಲಹಿರಿ ನಿಧನ

433

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮುಂಬೈ: ಬಾಲಿವುಡ್ ಖ್ಯಾತ ಗಾಯಕ ಬಪ್ಪಿ ಲಹಿರಿ ನಿಧನರಾಗಿದ್ದಾರೆ. 69 ವರ್ಷದ ಬಪ್ಪಿ ಲಹಿರಿ ಇಲ್ಲಿನ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. 80 ಹಾಗೂ 90ರ ದಶಕದಲ್ಲಿ ತಮ್ಮ ಗಾಯನದ ಮೂಲಕ ದೊಡ್ಡ ಅಲೆ ಎಬ್ಬಿಸಿದವರು.

ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಕಳೆದೊಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಡಿಸ್ಚಾರ್ಜ್ ಆಗಿದ್ದರು. ಆದರೆ, ಮಂಗಳವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಚಲ್ತೆ ಚಲ್ತೆ, ಡಿಸ್ಕೋ ಡ್ಯಾನ್ಸರ್, ಶರಾಬಿ ಸೇರಿದಂತೆ ಅನೇಕ ಸೂಪರ್ ಹಿಟ್ ಹಾಡುಗಳನ್ನು ಹಾಡಿದ್ದಾರೆ. 2020ರಲ್ಲಿ ಬಂದ ಬಾಗಿ-3 ಚಿತ್ರದಲ್ಲಿ ಹಾಡಿದ ಹಾಡು ಅವರ ಕೊನೆಯ ಚಿತ್ರವಾಗಿದೆ. ಸಿನಿಮಾ ರಂಗದ ಗಣ್ಯರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!