ಗ್ಯಾರೆಂಟಿಗಳಿಗೆ ಎಸ್ಸಿ, ಎಸ್ಟಿ ಅನುದಾನ ಬಳಕೆಗೆ ಖಂಡನೆ

255

ಪ್ರಜಾಸ್ತ್ರ ಸುದ್ದಿ

ಸಿಂದಗಿ: ರಾಜ್ಯ ಸರ್ಕಾರದ ಮಹತ್ವದ 5 ಗ್ಯಾರೆಂಟಿ ಯೋಜನೆಗಳಿಗೆ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲು ಇರುವ 11 ಸಾವಿರ ಕೋಟಿ ಅನುದಾನ ಬಳಕೆಗೆ ಸರ್ಕಾರ ಮುಂದಾಗಿದೆ. ಇದನ್ನು ಖಂಡಿಸಿ ಪಟ್ಟಣದ ತಾಲೂಕು ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ದಲಿತ ವಿದ್ಯಾರ್ಥಿ ಪರಿಷತ್ತಿನ ಯುವ ಮುಖಂಡ ಹರ್ಷವರ್ಧನ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದಗಳ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ 11 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡುವುದನ್ನು ವಿರೋಧಿಸುತ್ತೇವೆ. ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಅಂತಾ ಹೇಳಿದರು.

ಶೋಷಿತ ಸಮುದಾಯಗಳ ಹಣವನ್ನು ಕಿತ್ತುಕೊಂಡು ನಿಮ್ಮ ಯೋಜನೆಗಳಿಗೆ ಬಳಸದೆ ಎಸ್ಸಿ, ಎಸ್ಟಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಬಳಸಬೇಕು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹಾದೇವಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮುತ್ತು ಗುತ್ತರಗಿ, ವಿಶ್ವನಾಥ ಹರಿಜನ, ಅಶೋಕ ಮುರಡಿ, ಜೈ ಭೀಮ್ ರೆಡ್ಡಿ, ಕಲ್ಲಪ್ಪ ರೆಡ್ಡಿ ಸೇರಿ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!