ಕೇಂದ್ರದ ವಿರುದ್ಧ 10 ದಿನಗಳ ಕಾಲ ಕಾಂಗ್ರೆಸ್ ಪ್ರತಿಭಟನೆ

338

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಸತತ 10 ದಿನಗಳ ಕಾಲ ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಆರ್ಥಿಕ ಕುಸಿತು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ಕುಸಿತ, ನಿರುದ್ಯೋಗ ಸಮಸ್ಯೆ ಸೇರಿದಂತೆ ಹಲವು ವಿಚಾರಗಳಿಗಾಗಿ ನವೆಂಬರ್ 5ರಿಂದ ಪ್ರತಿಭಟನೆಗೆ ಮುಂದಾಗಿದೆ.

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯನ್ನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಹೇಳಿದ್ದಾರೆ. ನವೆಂಬರ್ 5ರಿಂದ 15ರ ವರೆಗೂ ರಾಜ್ಯಗಳ ರಾಜಧಾನಿ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಅಂತಾ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!