ಹೆಚ್ಡಿಕೆ ವಿರುದ್ಧ ವಿದ್ಯುತ್ ಕಳ್ಳತನ ಆರೋಪ

221

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಿದ್ಯುತ್ ಕಳ್ಳತನದ ಆರೋಪ ಮಾಡಿದೆ. ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ.ಪಿ ನಗರದ ನಿವಾಸದ ದೀಪಾವಳಿ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರಯ ಬಂದಿದ್ದು ದುರಂತ ಎಂದು ಕಾಂಗ್ರೆಸ್ ಪೋಸ್ಟ್ ಮಾಡಿತ್ತು.

ಕಾಂಗ್ರೆಸ್ ಪೋಸ್ಟ್ ಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರಕ್ಕೆ ಖಾಸಗಿ ಡಿಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಡದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಯಿಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಈ ಅಚಾತುರ್ಯಕ್ಕೆ ನನ್ನ ವಿಷಾಧವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ಮರುಕ ಇದೆ ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!