ಚಿಕ್ಕಮಗಳೂರಲ್ಲಿ ಕಾಂಗ್ರೆಸ್-ಬಿಜೆಪಿ ಹೈಡ್ರಾಮಾ

129

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಿದ್ರಮುಲ್ಲಾಖಾನ್ ಎಂದು ಟೀಕಿಸಿದ ಸಂಬಂಧ, ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಸಿ.ಟಿ ರವಿ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಿಗೆ ತಿರುಗೇಟು ನೀಡಲು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಗಲಾಟೆ ನಡೆದು, ಕಾಂಗ್ರೆಸ್ ಕಾರ್ಯಕರ್ತನಿಗೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ದೊಡ್ಡ ಹೈಡ್ರಾಮಾ ನಡೆದು ಹೋಗಿದೆ.




Leave a Reply

Your email address will not be published. Required fields are marked *

error: Content is protected !!