ತೇಜಸ್ವಿ ಸೂರ್ಯ ಮತ್ತೊಮ್ಮೆ ಎಮರ್ಜೆನ್ಸಿ ಎಕ್ಸಿಟ್ ಡೋರ್ ನಿಂದ ಎಸ್ಕೇಪ್: ಕಾಂಗ್ರೆಸ್

101

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 13ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಗಳ ಠೇವಣಿದಾರರ ಸಭೆ ಕರೆದಿದ್ದರು. ಈ ವೇಳೆ ಗಲಾಟೆಯಾಗಿದ್ದು, ಇದನ್ನು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ ಎಮರ್ಜೆನ್ಸಿ ಎಕ್ಸಿಟ್ ಡೋರ್ ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿದ್ದಾರೆ. ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು. ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ಸೂರ್ಯ ವಿರುದ್ಧ ಜನ ಆಕ್ರೊಶ ವ್ಯಕ್ತಪಡಿಸಿದ್ದಾರೆ ಎಂದು ಬರೆದುಕೊಂಡಿದೆ.




Leave a Reply

Your email address will not be published. Required fields are marked *

error: Content is protected !!