ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಂಧ ಈಗಾಗ್ಲೇ 124 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಇಂದು ಮುಂಜಾನೆ 11ಗಂಟೆಗೆ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಈ ಕುರಿತು ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ್ ಹೇಳಿದ್ದಾರೆ.
2ನೇ ಪಟ್ಟಿಯಲ್ಲಿ 43 ಅಭ್ಯರ್ಥಿಗಳು ಹೆಸರು ಇರಲಿದೆ. ಇದರಲ್ಲಿ ಯಾರ ಹೆಸರು ಇರಲಿದೆ ಅನ್ನೋ ಕುತೂಹಲವಿದೆ. ಇನ್ನು 3ನೇ ಪಟ್ಟಿಯನ್ನು ರಾಹುಲ್ ಗಾಂಧಿ ಏಪ್ರಿಲ್ 9ರಂದು ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಬಿಡುಗಡೆ ಮಾಡಲಿದೆ ಎಂದು ತಿಳಿದು ಬಂದಿದೆ.