ಬ್ರೇಕಿಂಗ್ ನ್ಯೂಸ್
Search

ಮಾಜಿ ಸಚಿವ ಡಿ.ಬಿ ಇನಾಮಾದರ್ ನಿಧನ

144

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಕಾಂಗ್ರೆಸ್ ಮಾಜಿ ಸಚಿವ ಡಿ.ಬಿ ಇನಾಮಾದರ್(74) ಮಂಗಳವಾರ ನಿಧನರಾಗಿದ್ದಾರೆ. ನ್ಯೂಮೋನಿಯಾ, ಲಂಗ್ಸ್ ಇಂಪೆಕ್ಷನ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಬೆಳಗಾವಿ ಜಿಲ್ಲೆ ಚನ್ನಮ್ಮ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರು. 1983 ಹಾಗೂ 85ರಲ್ಲಿ ಜನತಾ ಪಕ್ಷದಿಂದ ಶಾಸಕರಾಗಿದ್ದರು. ಮುಂದೆ ಕಾಂಗ್ರೆಸ್ ಸೇರ್ಪಡೆಯಾದರು. 1994, 99, 2013ರಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿದ್ದರು.

ರಾಮಕೃಷ್ಣ ಹೆಗಡೆ ಅವರ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು. ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರಾಗಿದ್ದರು. ಮೌಲ್ಯಯುತ ರಾಜಕೀಯ ಮಾಡಿದ್ದ ಇನಾಮಾದರ್ ಅವರನ್ನು ಇಲ್ಲಿನ ಜನತೆ ದಣಿ ಎಂದೇ ಕರೆಯುತ್ತಿದ್ದರು.




Leave a Reply

Your email address will not be published. Required fields are marked *

error: Content is protected !!