ಕಾಂಗ್ರೆಸ್ ಮಾಜಿ ಸಚಿವ ಶ್ರೀರಂಗದೇವರಾಯಲು ನಿಧನ

204

ಪ್ರಜಾಸ್ತ್ರ ಸುದ್ದಿ

ವಿಜಯನಗರ: ಗಂಗಾವತಿ ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಶ್ರೀರಂಗದೇವರಾಯಲು(87) ಮಂಗಳವಾರ ನಿಧನರಾಗಿದ್ದಾರೆ. ಸ್ವಗ್ರಾಮ ಆನೆಗೊಂದಿಯಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಯಲಿದೆ.

ವೀರಪ್ಪ ಮೊಯಿಲಿ ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ವಿಜಯನಗರ ಸಾಮ್ರಾಜ್ಯದ ವಂಶಸ್ಥರಾಗಿದ್ದ ಶ್ರೀರಂಗದೇವರಾಯಲು, ಪತ್ನಿ ಲಲಿತಾರಾಣಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!