ಕಾಂಗ್ರೆಸ್ ಮಾಜಿ ಶಾಸಕ ಎಸ್.ಎನ್ ಪಾಟೀಲ ನಿಧನ

147

ಪ್ರಜಾಸ್ತ್ರ ಸುದ್ದಿ

ಗದಗ: ಶಿರಹಟ್ಟಿ ತಾಲೂಕಿನ ಮಾಜಿ ಕಾಂಗ್ರೆಸ್ ಶಾಸಕ ಎಸ್.ಎನ್ ಪಾಟೀಲ(81) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂಜೆ 4 ಗಂಟೆಗೆ ಸ್ವಗ್ರಾಮ ಪಟಗಾಂವ್ ಬಡ್ನಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. 1989ರಿಂದ 1994ರ ವರೆಗೂ ಕಾಂಗ್ರೆಸ್ ಶಾಸಕರಾಗಿದ್ದರು. ಇವರ ನಿಧನಕ್ಕೆ ರಾಜಕೀಯ ಗಣ್ಯರು, ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!