ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಎರಡು ಬಾರಿ ಸಂಸದರಾಗಿದ್ದ ಕಾಂಗ್ರೆಸ್ಸಿನ ಇಕ್ಬಾಲ್ ಅಹಮದ್ ಸರಡಗಿ(80) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದಿಂದ 1999 ಹಾಗೂ 2004ರಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಆಯ್ಕೆ ಆಗಿದ್ದರು.
ಸರಡಗಿ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರು, ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಇಂದು ಸಂಜೆ ನಗರದ ಹಫ್ತ್ ಗುಂಬಜ್ ಹತ್ತಿರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.