ಲೋಕ ಕದನ: ರಾಜ್ಯದಲ್ಲಿ 20 ಸೀಟು ಗೆಲ್ಲಲು ಕೈ ಪ್ಲಾನ್

103

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮುಂಬವರು ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಇತ್ತೀಚೆಗೆ ನಡೆದ ಹಲವು ವಿಧಾನಸಭಾ ಚುನಾವಣೆಗಲ್ಲಿ ಕಾಂಗ್ರೆಸ್ ಗೆಲುವಿನ ಟ್ರ್ಯಾಕ್ ಗೆ ಮರಳುತ್ತಿದೆ. ಕರ್ನಾಟಕದಲ್ಲಿಯೂ ಭರ್ಜರಿ ಜಯ ಸಾಧಿಸಿರುವ ಕಾಂಗ್ರೆಸ್, ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದೆ.

ಬುಧವಾರ ಮಧ್ಯಾಹ್ನ ಸಂಪುಟ ಸಚಿವರೊಂದಿಗೆ, ಸಂಜೆ ಕೈ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಾಗಿದೆ. 31 ಜಿಲ್ಲೆಗಳ ಉಸ್ತುವಾರಿ ಸಚಿವರಿಗೂ ಲೋಕಸಭಾ ಚುನಾವಣೆಯಲ್ಲಿ ಜವಾಬ್ದಾರಿ ನೀಡಲಾಗುತ್ತೆ. ರಾಜ್ಯದಿಂದ 20 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು ಅನ್ನೋ ಗುರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟ ಭರವಸೆಯಂತೆ ನಡೆದುಕೊಳ್ಳುತ್ತಿದ್ದೇವೆ. ಇದೆ ರೀತಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ 20 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರತಿಪಕ್ಷ ಇಂಡಿಯಾ ತಂಡಕ್ಕೆ ಶಕ್ತಿ ತುಂಬುತ್ತೇವೆ. ಇದಕ್ಕಾಗಿ ಒಗ್ಗಟ್ಟಿನೊಂದಿಗೆ ಕೆಲಸ ಮಾಡುತ್ತೇವೆ ಎಂದು ರಾಜ್ಯ ನಾಯಕರು ಜಪಿಸಿದ್ದಾರಂತೆ.

ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎಂ.ಬಿ ಪಾಟೀಲ, ರಾಮಲಿಂಗಾ ರೆಡ್ಡಿ ಕೃಷ್ಣ ಬೈರೇಗೌಡ, ಹೆಚ್.ಕೆ ಪಾಟೀಲ, ಜಿ.ಪರಮೇಶ್ವರ್, ಕೆ.ಜೆ ಜಾರ್ಜ್, ಆರ್.ದೇಶಪಾಂಡೆ, ದಿನೇಶ್ ಗುಂಡೂರಾವ್, ಶಾಸಕರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ, ಎಂಎಲ್ಸಿ ಬಿ.ಕೆ ಹರಿಪ್ರಸಾದ್, ಸಲೀಂ ಅಹ್ಮದ್, ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಮಾಜಿ ಶಾಸಕ ರಮೇಶ್ ಕುಮಾರ್ ಸೇರಿದಂತೆ ರಾಜ್ಯದ 37ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!