ಪ್ರಜಾಸ್ತ್ರ ಸುದ್ದಿ
ದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ, ಸಂಸದೆ ಪ್ರಣೀತಿ ಕೌರ್ ಅವರನ್ನು ಕಾಂಗ್ರೆಸ್ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶುಕ್ರವಾರ ಅವರನ್ನು ಅಮಾನತುಗೊಳಿಸಲಾಗಿದೆ.
ಪಟಿಯಾಲಾ ಸಂಸದೆ ಪ್ರಣೀತಿ ಕೌರ್, ಬಿಜೆಪಿಗೆ ಸಹಾಯ ಮಾಡಲು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಿಸ್ತು ಸಮಿತಿ ಅಮಾನತುಗೊಳಿಸಿದೆಯಂತೆ.