ಕೇಂದ್ರದಿಂದ ಕರ್ನಾಟಕಕ್ಕೆ ಖಾಲಿ ಚೊಂಬು: ಸುರ್ಜೇವಾಲ್

76

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಖಾಲಿ ಚೊಂಬು ಎಂದು ಹೇಳಿ, ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ನಗರದ ಮೇಕ್ರಿ ಸರ್ಕಲ್ ಹತ್ತಿರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸುರ್ಜೇವಾಲ್, ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ, 15ನೇ ಹಣಕಾಸು ಆಯೋಗದಿಂದ ನೀಡಬೇಕಾಗಿದ್ದ 62 ಸಾವಿರ ಕೋಟಿ ಕೊಡದೆ ಖಾಲಿ ಚೊಂಬು ಕೊಟ್ಟಿದ್ದಾರೆ ಅಂತಾ ಕಿಡಿ ಕಾರಿದರು.

ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ಕೊಟ್ಟಿದ್ದು ಚೊಂಬು. ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿ ಕೊಟ್ಟಿದ್ದು ಚೊಂಬು. ನಾವು ಕಟ್ಟು ಪ್ರತಿ ನೂರು ರೂಪಾಯಿ ತೆರಿಗೆಯಲ್ಲಿ 13 ರೂಪಾಯಿ ಮಾತ್ರ ವಾಪಸ್ ನೀಡುವ ಮೂಲಕ ಚೊಂಬು. ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ರಾಜ್ಯಕ್ಕೆ ನೀಡಿದ್ದು ಚೊಂಬು ಎಂದು ವಾಗ್ದಾಳಿ ನಡೆಸಲಾಗಿದೆ.

ಈ ವೇಳೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ ಬಾಬು, ಶಾಸಕ ಅರ್ಷದ್ ರಿಜ್ವಾನ್ ಸೇರಿ ಅನೇಕರಿದ್ದರು.




Leave a Reply

Your email address will not be published. Required fields are marked *

error: Content is protected !!