ರಾಜಭವನ ಚಲೋ: ‘ಪೊಲೀಸರು ತಡೆದ್ರೆ ಅಲ್ಲೇ ಪ್ರತಿಭಟಿಸಿ’

228

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ಸಜ್ಜಾಗಿದೆ. ಬುಧವಾರ ಬೆಳಗ್ಗೆ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದು, ನಾಡಿನ ಮೂಲೆ ಮೂಲೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಬರ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ರೈತಪರ ಹೋರಾಟ ನಡೆಸಲು ಬೆಂಗಳೂರಿಗೆ ಆಗಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರನ್ನು ಪೊಲೀಸರು ಹೆದ್ದಾರಿಯಲ್ಲಿ ತಡೆಯುತ್ತಿರುವುದು ಖಂಡನೀಯ. ಪೊಲೀಸರು ತಡೆದ ಕಡೆಯೇ ರಸ್ತೆಯಲ್ಲಿ ಪ್ರತಿಭಟನೆ ಮಾಡಿ. ರಸ್ತೆ ಬಂದ್ ಮಾಡಿ ಎಂದು ಕಾರ್ಯಕರ್ತರು ಹಾಗೂ ರೈತರಲ್ಲಿ ಮನವಿ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!