ಸಿಎಂ ನಿವಾಸಕ್ಕೆ ಕಾಂಗ್ರೆಸ್ ಮುತ್ತಿಗೆ

191

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಈಶ್ವರಪ್ಪ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ರಾಜ್ಯದ ತುಂಬಾ ಪ್ರತಿಭಟನೆ ನಡೆಸಿದೆ. ಸಿಲಿಕಾನ್ ಸಿಟಿಯಲ್ಲಿ ಕಾಂಗ್ರೆಸ್ ನಾಯಕರು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ್ ಸೇರಿದಂತೆ ನೂರಾರು ಕಾರ್ಯಕರ್ತರು, ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಿಂದ ಪ್ರತಿಭಟನೆ ಹೊರಟು, ಸಿಎಂ ನಿವಾಸದವರೆಗೂ ಬಂದಿದ್ದಾರೆ.

ಈ ವೇಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತಿದ್ದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!