ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

285

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಡಿ ಮೂಲಕ ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಇಂದು ರಾಜಭವನ ಚಲೋ ನಡೆಸಿತು. ಆದರೆ, ಮಾರ್ಗಮಧ್ಯಯೇ ಪೊಲೀಸರು ತಡೆದಿದ್ದಾರೆ.

ಕೆಪಿಸಿಸಿ ಕಚೇರಿಯಿಂದ ಮೆರವಣಗೆ ನಡೆಸಲಾಯಿತು. ಆದರೆ, ಮಾರ್ಗಮಧ್ಯ ಅವರನ್ನು ತಡೆಯಲಾಯಿತು. ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆಯಿತು. ಆಗ ನಡುರಸ್ತೆಯಲ್ಲೇ ಪ್ರತಿಭಟನೆ ನಡೆಸಲಾಯಿತು. ಹೀಗಾಗಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ಮಹಿಳಾ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು.




Leave a Reply

Your email address will not be published. Required fields are marked *

error: Content is protected !!