ಅನ್ಯಾಯದ ವಿರುದ್ಧ ಧ್ವನಿ ಎತ್ತಲು ವಿಪಕ್ಷಗಳಿಗೆ ಆಹ್ವಾನ

100

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬರ ಪರಿಹಾರ, ತೆರಿಗೆ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯ ಖಂಡಿಸಿ ಕೇಂದ್ರದ ವಿರುದ್ಧ ಬುಧವಾರ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಪಕ್ಷಾತೀತವಾಗಿ ಬಿಜೆಪಿ, ಜೆಡಿಎಸ್ ನವರು ಕೈ ಜೋಡಿಸಿ ಎಂದು ಸಿಎಂ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವ ವಿತ್ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಸಂಸದರಾದ ಡಿ.ವಿ ಸದಾನಂದಗೌಡ, ಎ.ನಾರಾಯಣಸ್ವಾಮಿಗೆ ಪತ್ರ ಬರೆದು ಪ್ರತಿಭಟನೆಯಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!