ಇಡಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

248

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಸಂಬಂಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಇಡಿ ಮೂಲಕ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು, ಪ್ರತಿಭಟನೆ ನಡೆಸಲಾಗುತ್ತಿದೆ. ದೇಶ್ಯಾದ್ಯಂತ ಇರುವ ಇಡಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಲಾಲ್ ಬಾಗ್ ಡಬಲ್ ರೋಡ್ ಗೇಟಿನಿಂದ ಶಾಂತಿನಗರದಲ್ಲಿರುವ ಇಡಿ ಕಚೇರಿವರೆಗೂ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ ನಡೆಸಿದೆ. ವಿಪಕ್ಷ ನಾಯಕ ಸಿದ್ದರಾಯಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!