ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ, ಕಾಂಗ್ರೆಸ್ ನಾಯಕರು ವಶಕ್ಕೆ

136

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವಾರ್ಡ್ ಮೀಸಲಾತಿ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದೆ. ಮೀಸಲಾತಿ ವಿರೋಧಿ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಮಂಜುನಾಥ್ ರೆಡ್ಡಿ ಸೇರಿದಂತೆ ಬಿಬಿಎಂಪಿ ಕಾಂಗ್ರೆಸ್ ಮಾಜಿ ಸದಸ್ಯರು ಸೇರಿ ಕಾರ್ಯಕರ್ತರು ಫ್ರೀಡಂ ಪಾರ್ಕ್ ನಿಂದ ಸಿಎಂ ನಿವಾಸದತ್ತ ಹೊರಟಿದ್ದರು.

ಕಾಂಗ್ರೆಸ್ ಪ್ರತಿಭಟನೆ ಮಹಾರಾಣಿ ಕಾಲೇಜು ಸಮೀಪ ಬರುತ್ತಿದ್ದಂತೆ ಬ್ಯಾರಿಕೇಡ್ ಗಳನ್ನು ಹಾಕಿದ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಯಿತು. ಆಗ ಬಲವಂತವಾಗಿ ವ್ಯಾನಿನಲ್ಲಿ ಹತ್ತಿಸಿ ಠಾಣೆಗೆ ಕರೆದುಕೊಂಡು ಹೋಗಲಾಯಿತು.




Leave a Reply

Your email address will not be published. Required fields are marked *

error: Content is protected !!