ಬೆಂಗಳೂರಲ್ಲಿ ಮುಂದುವರೆದ ಕಾಂಗ್ರೆಸ್ ಪ್ರತಿಭಟನೆ

282

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ಪದೆಪದೆ ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕರೆದು ಕಿರುಕುಳ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬುಧವಾರ ಮತ್ತೆ ಪ್ರತಿಭಟನೆ ನಡೆಸಲಾಗಿದೆ. ನಗರದ ಸಿರ್ಸಿ ಸರ್ಕಲ್ ಬಳಿ ಶಾಸಕ ಜಮೀರ್ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಈ ವೇಳೆ ಜಮ್ಮೀರ್ ಅಹ್ಮದ್ ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ರಾಹುಲ್ ಗಾಂಧಿ ಐದನೇ ದಿನ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇದಕ್ಕೆ ರಾಜಸ್ಥಾನ್, ಛತ್ತೀಸಗಡ್ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಕಿಡಿ ಕಾರಿದ್ದಾರೆ.




Leave a Reply

Your email address will not be published. Required fields are marked *

error: Content is protected !!