ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಯಲ್ಲಿ ಜನ ಸಾಗರ

190

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಕರ್ನಾಟಕ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೆಜಿಸ್ಟಿಕ್ ನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದ ತನಕ ಪಾದಯಾತ್ರೆ ನಡೆಯಿತು.

ಈ ಒಂದು ನಡಿಗೆಯಲ್ಲಿ 1 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ರೈಲು, ಬಸ್ ಹಾಗೂ ಖಾಸಗಿ ವಾಹನಗಳ ಮೂಲಕ ಬೆಂಗಳೂರಿಗೆ ಲಗ್ಗೆ ಹಾಕಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಪಾದಯಾತ್ರೆ ನಡೆಸಿದರು.




Leave a Reply

Your email address will not be published. Required fields are marked *

error: Content is protected !!