ಪಾದಯಾತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ 10 ಲಕ್ಷ ಪರಿಹಾರ

174

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿ ವಾಪಸ್ ಹೋಗುತ್ತಿರುವ ಸಂದರ್ಭದಲ್ಲಿ ರಮೇಶ್ ಎಂಬುವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸಾಗರ ತಾಲೂಕಿನ ಉತ್ತರೆದಿಬ್ಬ ಗ್ರಾಮದಿಂದ ಬಂದಿದ್ದ ರಮೇಶ್, ಹಿರಿಯೂರು ಕೋರ್ಟ್ ಹತ್ತಿರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪಕ್ಷದ ಕಾರ್ಯಕರ್ತನ ಸಾವಿನಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳಲಾಗುತ್ತೆ ಎಂದರು.




Leave a Reply

Your email address will not be published. Required fields are marked *

error: Content is protected !!