ದೇಶ್ಯಾದ್ಯಂತ ಸಂವಿಧಾನ ದಿನ ಆಚರಣೆ

185

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಭಾರತದ ಸಂವಿಧಾನವು ಸಂವಿಧಾನ ಸಭೆಯಲ್ಲಿ ಅಂಗೀಕರಿಸ್ಪಟ್ಟ ದಿನವಾದ ನವೆಂಬರ್ 26ರಂದು ದೇಶ್ಯಾದ್ಯಂತ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಪ್ರತಿಯೊಂದು ಸರ್ಕಾರಿ, ಶಾಲಾ, ಕಾಲೇಜುಗಳಲ್ಲಿ ಇಂದು ಸಂವಿಧಾನ ದಿನ ಆಚರಿಸುವ ಮೂಲಕ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ತಿಳಿಸಿಕೊಡಲಾಗುತ್ತೆ.

ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲ ಶಾಲಾ, ಕಾಲೇಜುಗಳಲ್ಲಿ ಏಕಕಾಲಕ್ಕೆ ಸಂವಿಧಾನದ ಪೀಠಿಕೆ ಓದಲಾಗುತ್ತೆ. ಇದಕ್ಕೆ ಸಂಬಂಧಿಸಿದಂತೆ ಚರ್ಚಾ ಸ್ಪರ್ಧೆ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗಿದ್ದು, ಇಂದು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!