2023ರ ಚುನಾವಣೆಯಲ್ಲಿ ಸ್ಪರ್ಧೆ: ನಟ ಶಶಿಕುಮಾರ್

257

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಮಂಬರುವ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ನಟ, ಮಾಜಿ ಸಂಸದ ಶಶಿಕುಮಾರ್ ಹೇಳಿದ್ದಾರೆ. ಚಳ್ಳಕೆರೆಯ ಕಾಟಪ್ಪನಹಟ್ಟಿ ಪ್ರಕಾಶ್ ನಿವಾಸದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಎಸ್ಟಿ ಮೀಸಲು ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುತ್ತೇನೆ ಎಂದರು.

ಕಳೆದ ಬಾರಿ ಟಿಕೆಟ್ ಸಿಗದೆ ಇರುವ ಕಾರಣಕ್ಕೆ ಹೊಸದುರ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಈ ಬಾರಿ ಜಿಲ್ಲೆಯ ಎಸ್ಟಿ ಮೀಸಲು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದಿದ್ದಾರೆ. 1999ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಸಂಯುಕ್ತ ಜನತಾದಳದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು.

2008ರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ತಿಪ್ಪೇಸ್ವಾಮಿ ವಿರುದ್ಧ ಸೋಲು ಅನುಭವಿಸಿದ್ದರು. 2018ರಲ್ಲಿ ಕಾಂಗ್ರೆಸ್ ಟಿಕೆಟ್ ನೀಡಲಿಲ್ಲ. ಹೀಗಾಗಿ ಕೊನೆಯ ಕ್ಷಣದಲ್ಲಿ ಜೆಡಿಎಸ್ ಸೇರ್ಪಡೆಯಾಗಿ ಹೊಸದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಹೀನಾಯವಾಗಿ ಸೋಲು ಕಂಡರು. 2023ರ ಚುನಾವಣೆಗೆ ಇನ್ನು 18 ತಿಂಗಳಿದ್ದು, ಸ್ಪರ್ಧಿಸುವುದಾಗಿ ಈಗ್ಲೇ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!