ಸಂತೋಷ್ ಸಾವು ಪ್ರಕರಣ: ಈಶ್ವರಪ್ಪಗೆ ರಿಲೀಫ್

322

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ ಸಾವು ಪ್ರಕರಣ ರಾಜ್ಯದಲ್ಲಿ ದೊಡ್ಡ ಸಂಚಲನ ಮೂಡಿಸಿತು. ಈ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪನವರ ತಲೆದಂಡವಾಯಿತು. ಇದೀಗ ಈ ಪ್ರಕರಣದಲ್ಲಿ ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.

ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಜನಪತ್ರಿನಿಧಿಗಳ ನ್ಯಾಯಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ. ಕೊಲೆ ಎಂಬುದಕ್ಕೆ ಸಾಕ್ಷ್ಯಧಾರ ಇಲ್ಲದೆ ಹಿನ್ನಲೆಯಲ್ಲಿ ಬೆಂಗಳೂರು ಜನಪತ್ರಿನಿಧಿಗಳ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಿದೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರಿಂದ ಕೋರ್ಟ್ ಗೆ ವರದಿ ಸಲ್ಲಿಸಲಾಗಿದೆ.

ಆಡಿಯೋ, ವಿಡಿಯೋ, ಮೊಬೈಲ್  ಸಿಸಿಟಿವಿ ಪರಿಶೀಲನೆ ಸೇರಿದಂತೆ ಎಲ್ಲಾ ತಾಂತ್ರಿಕ ಸಾಕ್ಷ್ಯ ಸಂಗ್ರಹಿಸಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಇದರಲ್ಲಿ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಶೇಕಡ 40ರಷ್ಟು ಕಮಿಷನ್ ಆರೋಪ ಕೇಳಿ ಬಂದಿತ್ತು. ಏಪ್ರಿಲ್ 12ರಂದು ಸಂತೋಷ್ ಪಾಟೀಲ ಉಡುಪಿಯ ಹೋಟೆಲ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.




Leave a Reply

Your email address will not be published. Required fields are marked *

error: Content is protected !!