ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ, ಇಬ್ಬರ ಬಂಧನ

126

ಪ್ರಜಾಸ್ತ್ರ ಸುದ್ದಿ

ಮಂಗಳೂರು: ನಗರದಲ್ಲಿ ನವೆಂಬರ್ 19ರಂದು ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ತಮಿಳುನಾಡಿನ ಲಿಂಕ್ ಪತ್ತೆಯಾಗಿದ್ದು, ತಿರುಪ್ಪುರು ಜಿಲ್ಲೆಯ 2 ಸ್ಥಳಕ್ಕೆ ದಾಳಿ ನಡೆಸಲಾಗಿದೆ.

ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಸುಮಾರು 5 ಗಂಟೆಗಳ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಅಂದು ನಡೆದ ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಹಾಗೂ ಆಟೋ ಚಾಲಕ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!