ಪಿಯು ವಿದ್ಯಾರ್ಥಿಗಳಲ್ಲಿ ಕರೋನಾ ಜಾಗೃತಿ

387

ಮಂಡ್ಯ: ಕೃಷ್ಣರಾಜಪೇಟೆ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ನಲ್ಲಿ ಕೈತೊಳೆಸಿ ಕರೊನಾ ಜಾಗೃತಿ ಮೂಡಿಸಲಾಯ್ತು. ಕರೋನಾ ಭೀತಿ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅವರು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸ್ತಿದ್ದಾರೆ.

ಸ್ಯಾನಿಟೈಸರ್ ನಲ್ಲಿ ಕೈತೊಳೆಯುವ ಅಭಿಯಾನಕ್ಕೆ ತಹಶೀಲ್ದಾರ್ ಎಂ.ಶಿವಮೂರ್ತಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ಡಿ.ಬಿ.ಸತ್ಯ ಚಾಲನೆ ನೀಡಿದರು. ಕೊರೋನಾ ತಡೆಗೆ ಸಾರ್ವಜನಿಕರು ಹಾಗೂ ಯುವಜನರ ಸಹಕಾರವು ಅತ್ಯಗತ್ಯವಾಗಿ ಬೇಕಾಗಿದೆ ಅಂತಾ ಹೇಳಿದ್ರು.

ಮಾಸ್ಕ್ ಗಳನ್ನ ಧರಿಸಿ, ಸ್ಯಾನಿಟೈಸರ್ ಬಳಸಿ ಕೈತೊಳೆಯುವ ಮೂಲಕ ಕೊರೋನಾ ವೈರಾಣು ಹರಡುವುದನ್ನು ತಡೆಯಬಹುದು. ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಮತ್ತು ಪ್ರಾಂಶುಪಾಲ ಡಿ.ಬಿ.ಸತ್ಯ ಮನವಿ ಮಾಡಿದರು.




Leave a Reply

Your email address will not be published. Required fields are marked *

error: Content is protected !!