ರಾಜ್ಯದಲ್ಲಿ ತ್ರಿಶತಕ ಬಾರಿಸಿದ ಕರೋನಾ

367

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಹೆಲ್ತ್ ಬುಲೆಟಿನ್ ಬಂದಿದ್ದು, ಇಂದು ರಾಜ್ಯದಲ್ಲಿ ಬರೋಬ್ಬರಿ 308 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 6,824 ಆಗಿದೆ. ಇದರ ಜೊತೆಗೆ ಬೆಂಗಳೂರು ನಗರ 2, ಧಾರವಾಡ 1 ಸೇರಿ ಮೂವರು ಸಾವನ್ನಪ್ಪಿದ್ದು, 81 ಜನರು ಇದುವರೆಗೂ ಕರೋನಾಗೆ ಬಲಿಯಾಗಿದ್ದಾರೆ.

209 ಜನರು ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೂ 3,648 ಜನರು ಗುಣಮುಖರಾಗಿದ್ದು, 3092 ಕೇಸ್ ಚಾಲ್ತಿಯಲ್ಲಿವೆ. ಜಿಲ್ಲಾವಾರು ಸೋಂಕಿತರ ಸಂಖ್ಯೆ ಇಲ್ಲಿದೆ..

ಕಲಬುರಗಿ 67, ಯಾದಗಿರಿ 52, ಬೀದರ 42, ಬೆಂಗಳೂರು ನಗರ 31, ದಕ್ಷಿಣ ಕನ್ನಡ 30, ಧಾರವಾಡ 20, ಉಡುಪಿ 14, ಹಾಸನ 11, ಬಳ್ಳಾರಿ 11, ವಿಜಯಪುರ 4, ರಾಯಚೂರು 5, ಉತ್ತರ ಕನ್ನಡ 5, ಕೋಲಾರ 4, ದಾವಣಗೆರೆ 3, ಮಂಡ್ಯ 2, ಹಾವೇರಿ 2, ಮೈಸೂರು 1, ಬಾಗಲಕೋಟೆ 1 ಹಾಗೂ ರಾಮನಗರದಲ್ಲಿ 1 ಸೋಂಕಿತ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!