ರಾಜ್ಯದಲ್ಲಿ 6,835 ಜನರಲ್ಲಿ ಸೋಂಕು ದೃಢ

227

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕು ದಿನದಿಂದ ದಿನಕ್ಕೆ ಕಡಿಮೆಯಾಗ್ತಿದೆ. ಕಳೆದ 24ಗಂಟೆಯಲ್ಲಿ 6,835 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ 2771969ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 15,409 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿಯ ತನಕ 2566774 ಜನರು ಚೇತರಿಸಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಇನ್ನು 172141 ಪ್ರಕರಣಗಳು ಸಕ್ರಿಯವಾಗಿವೆ. ಇಂದು 120 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 33033ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇಕಡ 4.56 ಇದೆ. ಸಾವಿನ ಪ್ರಮಾಣ ಶೇಕಡ 1.75ರಷ್ಟಿದೆ. ಈ ಮೂಲಕ ಪ್ರತಿಯೊಂದು ಜಿಲ್ಲೆಯಲ್ಲಿ ಸೋಂಕು ಇಳಿಮುಖ ಕಾಣ್ತಿದೆ. ಜಿಲ್ಲಾವಾರು ವರದಿ ಇಲ್ಲಿದೆ.




Leave a Reply

Your email address will not be published. Required fields are marked *

error: Content is protected !!