ವಿಜಯಪುರದಲ್ಲಿ ಸೋಂಕಿತ ವಿದ್ಯಾರ್ಥಿನಿ ಫೋಟೋ ಲೀಕ್!

405

ವಿಜಯಪುರ: ಗುಮ್ಮಟನಗರಿಯಲ್ಲಿನ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದೀಗ ಆಕೆಯ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ ಎಂದು ಹೇಳಲಾಗ್ತಿದೆ.

ವಿದ್ಯಾರ್ಥಿನಿಯ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಬಿಟ್ಟ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎನ್ನಲಾಗ್ತಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಫೋಟೋ ಲೀಕ್ ಆಗಿದ್ದರ ಸತ್ಯಾಸತ್ಯತೆ ತಿಳಿಯಬೇಕಿದೆ.

ವಿದ್ಯಾರ್ಥಿನಿಯಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದ್ಮೇಲೆ ಏಪ್ರಿಲ್ 17ರಂದು ಸ್ವತಃ ಕ್ವಾರಂಟೈನ್ ಗೆ ಒಳಗಾಗಿದ್ಳು. ಗುರುವಾರ ಬಂದ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈಗ ಆಕೆ ಸ್ಥಿರವಾಗಿದ್ದು, ಸೋಂಕು ಹೇಗೆ ತಗುಲಿತು ಅನ್ನೋದರ ತನಿಖೆ ನಡೆಸಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!