ಶಾಲಾ, ಕಾಲೇಜು, ಥಿಯೇಟರ್ ಗಳಲ್ಲಿ ಮಾಸ್ಕ್ ಕಡ್ಡಾಯ

141

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ ಮತ್ತೆ ಕಾಣಿಸಿಕೊಳ್ಳುತ್ತಿದೆ ಎಂದು ರಾಜ್ಯದಲ್ಲಿ ಶಾಲಾ, ಕಾಲೇಜುಗಳಲ್ಲಿ, ಥಿಯೇಟರ್ ಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಜೊತೆಗೆ ಹೊಸ ವರ್ಷದ ಸಂಭ್ರಮಾಚರಣೆಯಲ್ಲೂ ಮಾಸ್ಕ್ ಕಡ್ಡಾಯ ಎಂದಿದೆ.

ಕೋವಿಡ್ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕರೋನಾ ಸೋಂಕಿಗೆ ಆರಂಭದಲ್ಲಿಯೇ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾತನಾಡಿ, ಶಾಲಾ, ಕಾಲೇಜು, ಥಿಯೇಟರ್ ಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಹೊಸ ವರ್ಷಾಚರಣೆ ವೇಳೆ ಮಾಸ್ಕ್ ಕಡ್ಡಾಯ. ಈ ಬಗ್ಗೆ ಆತಂಕ ಬೇಡ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.




Leave a Reply

Your email address will not be published. Required fields are marked *

error: Content is protected !!