ಕರೋನಾ ವಾರಿಯರ್ ಸಾವು: 30 ಲಕ್ಷ ಪರಿಹಾರಕ್ಕೆ ಮನವಿ

362

ಪ್ರಜಾಸ್ತ್ರ ಸುದ್ದಿ

ನಾಗಮಂಗಲ: ಕರೋನಾ ವಾರಿಯರ್ ಆಗಿ ಕೆಲಸ ನಿರ್ವಹಿಸ್ತಿದ್ದ ಶಿಕ್ಷಕರೊಬ್ಬರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತ ಶಿಕ್ಷಕನ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ತಾಲೂಕು ಶಿಕ್ಷಕರ ಸಂಘ ಮನವಿ ಮಾಡಿದೆ.

ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಕದಬಹಳ್ಳಿ ವೃತ್ತದಲ್ಲಿ ಸಿಆರ್ ಪಿಯಾಗಿ ಕರೋನಾ ಸೋಂಕು ನಿಯಂತ್ರಣ ಸಂಬಂಧ, ಸಕ್ರಿಯ ಪ್ರಕರಣಗಳ ಸಂಪರ್ಕದಲ್ಲಿರುವವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ವ್ಯಕ್ತಿಗಳನ್ನ  ಗುರುತಿಸುವ  ಕಾಂಟ್ಯಾಕ್ಟ್ ಟ್ರೇಸಿಂಗ್ ಆಪ್ ನಲ್ಲಿ ನೋಂದಿಕರಿಸುವ ಕಾರ್ಯಕ್ಕೆ ನೇಮಿಸಲಾಗಿತ್ತು.

ಕರೋನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕನಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಜುಲೈ 29ರಂದು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಧೃಡಪಟ್ಟಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪರಿಹಾರಕ್ಕೆ ತಹಶೀಲ್ದಾರ್ ಗೆ ಮನವಿ

ಕರೋನಾ ವಾರಿಯರ್ಸ್ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಕೋವಿಡ್-19 ಸೋಂಕಿನಿಂದ ಮರಣ ಹೊಂದಿದ ಮೃತ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ನೌಕರರಿಗೆ ನೀಡುತ್ತಿರುವ 30 ಲಕ್ಷ ರೂಪಾಯಿಗಳ ವಿಮಾ ಸೌಲಭ್ಯವನ್ನು ನೀಡಬೇಕೆಂದು ತಹಶೀಲ್ದಾರ್ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ತಾಲ್ಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ, ಮಂಜುನಾಥ, ಕಾರ್ಯದರ್ಶಿ ದೇವರಾಜು, ಸಿ.ಆರ್.ಪಿ ಸಂಘ ರಾಜ್ಯಾಧ್ಯಕ್ಷ ನಾಗೇಶ, ಕಾರ್ಯದರ್ಶಿ ರಂಗನಾಥ ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!