13 ದಿನದಲ್ಲಿ ದೇಶದಲ್ಲಿ ಎಷ್ಟು ಲಕ್ಷ ಜನರು ಕರೋನಾದಿಂದ ಗುಣಮುಖ ಗೊತ್ತಾ?

286

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಕಳೆದ 13 ದಿನಗಳಲ್ಲಿ ದೇಶದಲ್ಲಿ ಬರೋಬ್ಬರಿ 10 ಲಕ್ಷ ಜನರು ಗುಣಮುಖರಾಗಿದ್ದಾರೆ. ಇದರೊಂದಿಗೆ ಗುಣಮುಖರಾಗುವವರ ಪ್ರಮಾಣ ಶೇಕಡ 90.62ರಷ್ಟು ಆಗಿದೆ ಎಂದು ಹೇಳಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ ಭೂಷಣ ಮಾತ್ನಾಡಿ, ದೇಶದಲ್ಲಿ 79,46,429 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಇಂದು 36,470 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ದೇಶದಲ್ಲಿ 1,19,502 ಪ್ರಕರಣಗಳು ಸಕ್ರಿಯವಾಗಿವೆ ಎಂದು ಹೇಳಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಕಡಿಮೆಯಾಗ್ತಿರುವುದು ಖುಷಿಯ ಸಂಗತಿ.




Leave a Reply

Your email address will not be published. Required fields are marked *

error: Content is protected !!