ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಪಕ್ಷದ ಮುಖಂಡರಿಗೆ ನಿಗಮ, ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
40 ನಿಗಮ, ಮಂಡಳಿಗಳ ಪಟ್ಟಿ ಮಾಡಲಾಗುತ್ತಿದೆ. ಜುಲೈ ಮೊದಲ ವಾರದಲ್ಲಿ ಬಜೆಟ್ ಮಂಡನೆ ನಡೆಯಲಿದೆ. ಇದಾದ ನಂತರ ಅಧಿಕಾರ ಹಂಚಿಕೆ ಮಾಡಲು ಸಿದ್ಧತೆ ನಡೆದಿದೆ. ಮೊದಲ ಸುತ್ತಿನಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಆದ್ಯತೆ. ನಂತರ ಪಕ್ಷದ ಮುಖಂಡರಿಗೆ ಹುದ್ದೆ ನೀಡಲಾಗುವುದಂತೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಈ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.