ಯಾದಗಿರಿಯಲ್ಲಿ ಜೋಡಿಯೊಂದು ಆತ್ಮಹತ್ಯೆ

159

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಶಿವರಾತ್ರಿ ಹಬ್ಬದ ದಿನವೇ ಜೋಡಿಯೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಪುರ ತಾಲೂಕಿನ ಹುರಸಗುಂಡಗಿಯಲ್ಲಿ ನಡೆದಿದೆ. ಈಶಪ್ಪ(22) ಹಾಗೂ ಸುವರ್ಣ(20) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಈಶಪ್ಪ ಹಾಗೂ ಸುವರ್ಣ ಐದಾರು ವರ್ಷಗಳಿಂದ ಪ್ರೀತಿಸುತ್ತಿದ್ದಂತೆ. ಇದರ ನಡುವೆ 2 ವರ್ಷಗಳ ಹಿಂದೆ ಸುವರ್ಣಳನ್ನು ಬೇರೆ ಯುವಕನೊಂದಿಗೆ ಮದುವೆ ಮಾಡಲಾಗಿದೆ. ಹೀಗಾಗಿ ಆಕೆ ಬೆಂಗಳೂರಿನಲ್ಲಿ ವಾಸವಾಗಿದ್ದಳು. ನಿನ್ನೆ ಗ್ರಾಮಕ್ಕೆ ಬಂದಿದ್ದ ಸುವರ್ಣ ಹಾಗೂ ಈಶಪ್ಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!