ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲಗೆ ಕೋರ್ಟ್ ನೋಟಿಸ್

161

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಜಟಾಪಟಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತು. ಇದೀಗ ಈ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರಿಗೆ ಕೋರ್ಟ್ ನೋಟಿಸ್ ನೀಡಿದೆ.

ಕ್ರಿಮಿನಲ್ ಮಾನನಷ್ಟ ಪ್ರಕರಣ ಸಂಬಂಧ 8ನೇ ಎಸಿಎಂಎಂ ಕೋರ್ಟ್ ಏಪ್ರಿಲ್ 26ಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈ ಮೂಲಕ ಇದೀಗ ಕಾನೂನು ಹೋರಾಟ ಶುರುವಾಗಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ಐಪಿಎಸ್ ರೂಪಾ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಪರಿಣಾಮ ಇಬ್ಬರು ನಡುವೆ ಜಿದ್ದಾಜಿದ್ದಿ ನಡೆಯಿತು ಅನ್ನೋದು ಎಲ್ಲರೂ ಗೊತ್ತಿರುವ ಸಂಗತಿಯಾಗಿದೆ.




Leave a Reply

Your email address will not be published. Required fields are marked *

error: Content is protected !!