24 ಗಂಟೆಯಲ್ಲಿ 2 ಸಾವಿರ ಸಮೀಪ ಸೋಂಕು.. ಬೆಂದುಹೋದ ಬೆಂಗಳೂರು..

337

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕು ಹೆಚ್ಚಾಗ್ತಿರುವುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 1,839 ಸೋಂಕು ಪ್ರಕರಣ ಪತ್ತೆಯಾಗಿವೆ. ಇದರೊಂದಿಗೆ 21,549 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಇಂದು 42 ಜನ ಸಾವನ್ನಪ್ಪುವ ಮೂಲಕ 335ಕ್ಕೆ ಏರಿಕೆಯಾಗಿದೆ. ಬೆಂಗಳೂರು ಒಂದರಲ್ಲಿಯೇ 24 ಜನ ಸಾವನ್ನಪ್ಪಿದ್ದಾರೆ. ಬೀದರ 6, ದಕ್ಷಿಣ ಕನ್ನಡ 4, ಕಲಬುರಗಿ 3, ಧಾರವಾಡ 2, ಹಾಸನ 1 ಸಾವು ಪ್ರಕರಣ ದಾಖಲಾಗಿದೆ.

ಇಂದು 439 ಜನ ಡಿಸ್ಚಾರ್ಜ್ ಆಗುವುದರೊಂದಿಗೆ 9,244 ಜನ ಗುಣಮುಖರಾಗಿದ್ದು, 11,966 ಪ್ರಕರಣಗಳು ಚಾಲ್ತಿಯಲ್ಲಿವೆ. ಸೋಂಕಿತರ ಅಂಕಿಸಂಖ್ಯೆ ಇಲ್ಲಿದೆ..

ಬೆಂಗಳೂರು ನಗರ 1,172, ದಕ್ಷಿಣ ಕನ್ನಡ 75, ಬಳ್ಳಾರಿ 73, ಬೀದರ 51, ಧಾರವಾಡ 45, ರಾಯಚೂರು 41, ಮೈಸೂರು 38, ಕಲಬುರಗಿ 37, ವಿಜಯಪುರ 37, ಮಂಡ್ಯ 35, ಉತ್ತರ ಕನ್ನಡ 35, ಶಿವಮೊಗ್ಗ 31, ಹಾವೇರಿ 28, ಬೆಳಗಾವಿ 27, ಹಾಸನ 25, ಉಡುಪಿ 18, ಚಿಕ್ಕಬಳ್ಳಾಪುರ 12, ತುಮಕೂರು 12, ಬೆಂ.ಗ್ರಾಮಾಂತರ 11, ಕೋಲಾರ 11, ದಾವಣಗೆರೆ 7, ಚಾಮರಾಜನಗರ 5, ಗದಗ 4, ಕೊಪ್ಪಳ 3, ಚಿಕ್ಕಮಗಳೂರು 3, ರಾಮನಗರ 2, ಯಾದಗರಿ 1 ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!