ವಿಜಯಪುರ ಜಿಲ್ಲೆಯಾದ್ಯಂತ ಹೋಳಿ ಹಬ್ಬ ನಿಷೇಧ

483

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಎಲ್ಲೆಡೆ ಕೋವಿಡ್ 2ನೇ ಅಲೆ ಶುರುವಾಗಿದೆ. ರಾಜ್ಯದಲ್ಲಿಯೂ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದೆ. ಅದೆ ರೀತಿ ವಿಜಯಪುರ ಜಿಲ್ಲೆಯಲ್ಲಿಯೂ ಕಳೆದೊಂದು ವಾರದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಾರ್ಚ್ 28ರಿಂದ 31ರ ವರೆಗೆ ನಡೆಯುವ ಹೋಳಿ ಹಬ್ಬದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಷ್ಟ. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರದ ಸುತ್ತೋಲೆಯ ಸೂಚನೆಯ ಮೇರೆಗೆ ಈ ಬಾರಿಯ ಹೋಳಿ ಹಬ್ಬ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವ ಸಾರ್ವಜನಿಕರು, ಕರ್ತವ್ಯದಲ್ಲಿ ನಿರ್ಲಕ್ಷ ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ, ಸಾಂಕ್ರಾಮಿಕ ರೋಗ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ 2005ರ ಅನ್ವಯ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!