ನಾಳೆ ಡಿಸಿ, ಡಿಎಚ್ಓ,ಸಿಇಓ, ಎಸ್ಪಿ ಜೊತೆ ಸಿಎಂ ಸಭೆ

244

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಡಿಸಿ, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಸರ್ಜನ್ ಗಳು, ಸಿಇಓಗಳು, ಎಸ್ಪಿ, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಡೀನ್ ಜೊತೆ ಸಭೆ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿ ಮುನ್ನೆಚ್ಚರಿಕ್ರ ಕ್ರಮ, ಲಸಿಕೆ, ವೈದ್ಯಕೀಯ ಸೌಲಭ್ಯ ಹಾಗೂ ನಗರಗಳಿಂದ ಊರಿಗೆ ಬಂದಿರುವ ಜನರ ಕುರಿತು ಮಾಹಿತಿ ಪಡೆಯಲಿದ್ದು, ಇನ್ನಷ್ಟು ಕಟ್ಟುನಿಟ್ಟಿನ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!