ವಿಜಯಪುರದಲ್ಲಿ 7 ಜನ ಪೊಲೀಸರಿಗೆ ಸೋಂಕು ದೃಢ

358

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯಲ್ಲಿ ಕಂಟೋನ್ಮೆಂಟ್ ಝೋನ್, ಕೋವಿಡ್ ಆಸ್ಪತ್ರೆ, ಕರೋನಾ ಕರ್ತವ್ಯ ನಿರ್ವಹಿಸಿದ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದೆ.

ಪೊಲೀಸ್ ಇಲಾಖೆಯ 7 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ವಿಜಯಪುರ ಪೊಲೀಸ್ ಉಪ ವಿಭಾಗದ ಠಾಣೆಯಲ್ಲಿ 2 ಹಾಗೂ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ 5 ಕರೋನಾ ಸೋಂಕು ದೃಢಪಟ್ಟಿವೆ ಎಂದು ಎಸ್ಪಿ ಅನುಪಮ ಅಗರವಾಲ್ ತಿಳಿಸಿದ್ದಾರೆ.

ಸೋಂಕು ದೃಢಪಟ್ಟ ಸಿಬ್ಬಂದಿಯನ್ನ ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರನ್ನ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಅಲ್ದೇ, ಈ ಎರಡು ಠಾಣೆಗಳನ್ನ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!