ದೇವರಹಿಪ್ಪರಗಿ ಶಾಸಕರಿಗೆ ಕೋವಿಡ್ 19

371

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರಿಗೆ ಕೋವಿಡ್ 19 ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಶಾಸಕರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ದೃಢಪಡಿಸಿದ್ದಾರೆ.

ಆಗಸ್ಟ್ 14ರಂದು ತಪಾಸಣೆಗೆ ಹೋಗಿದ್ರಂತೆ. ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ರೂ ಕೋವಿಡ್ 19 ತಗುಲಿರುವುದು ದೃಢಪಟ್ಟಿದ್ದು, ತಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯದಲ್ಲಿ ಯಾವುದೆ ತೊಂದರೆಯಿಲ್ಲವೆಂದು ಹೇಳಿದ್ದಾರೆ.

ಇನ್ನು ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮನೆಯಲ್ಲಿ ಇರಿ. ಮುಂಜಾಗ್ರತ ಕ್ರಮವಾಗಿ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!