ಸಭೆ, ಸಮಾರಂಭಗಳಲ್ಲಿ ಜನರ ಮಿತಿ ಕಡಿಮೆ ಮಾಡಲು ಪ್ರಸ್ತಾವನೆ

222

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇದೀಗ ಎಲ್ಲೆಡೆ ಕೋವಿಡ್ ರೂಪಾಂತರ ಓಮಿಕ್ರಾನ್ ಭೀತಿ ಶುರುವಾಗಿದೆ. ರಾಜ್ಯದಲ್ಲಿ ಗುರುವಾರ ಇಬ್ಬರಲ್ಲಿ ಪತ್ತೆಯಾಗಿದ್ದು ಸಿಎಂ ತುರ್ತು ಸಭೆ ಕರೆದಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವ ಸಂಬಂಧ ಬಿಬಿಎಂಪಿ ಮುಂದಾಗಿದೆ.

ಒಳಾಂಗಣ ಹಾಗೂ ಹೊರಾಂಗಣದಲ್ಲಿ ನಡೆಯುವ ಸಭೆ, ಸಮಾರಂಭಗಳಲ್ಲಿ ಜನರ ಭಾಗವಹಿಸುವುದಕ್ಕೆ ಕಡಿವಾಣ ಹಾಕಲು ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಈ ಬಗ್ಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಮಾತನಾಡಿದ್ದಾರೆ. ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗುತ್ತೆ. ಹೀಗಾಗಿ ಇದಕ್ಕೆ ಬ್ರೇಕ್ ಹಾಕುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!