ಪ್ರಜಾಸ್ತ್ರ ಸುದ್ದಿ
ಬಳ್ಳಾರಿ: ರಾಜ್ಯದಲ್ಲಿ ಕರೋನಾ ಸಾವಿನ ಸಂಖ್ಯೆ ಸಹ ಏರಿಕೆ ಕಾಣ್ತಿದೆ. ಅದರಂತೆ ಇಂದು ಜಿಲ್ಲೆಯಲ್ಲಿ ಕರೋನಾ ವೈರಾಣುವಿಗೆ ಮತ್ತೊಂದು ಸಾವು ಸಂಭವಿಸಿದೆ. 85 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ.
ವೃದ್ಧನಿಗೆ ಕರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಸಂಜೆ ಬರುವ ಹೆಲ್ತ್ ಬುಲೆಟಿನ್ ನಲ್ಲಿ ಇದು ವರದಿಯಾಗಲಿದೆ.