ರಾಜ್ಯದಲ್ಲಿ ಕರೋನಾಗೆ ಮತ್ತೊಂದು ಸಾವು

353

ಚಿಕ್ಕಬಳ್ಳಾಪುರ: ಕರೋನಾ ಸೋಂಕಿಗೆ ತುತ್ತಾಗಿದ್ದ ಜಿಲ್ಲೆಯ 69 ವರ್ಷದ ವೃದ್ಧ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೋವಿಡ್ ಸೋಂಕಿನಿಂದ 69 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

https://twitter.com/sriramulubjp/status/1250310625948917764?s=20

ಈ ವೃದ್ಧನ ಸಾವಿನೊಂದಿಗೆ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮಂಗಳವಾರದ ಸಂಜೆಯ ವರದಿಯಂತೆ ರಾಜ್ಯದಲ್ಲಿ 26 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.   




Leave a Reply

Your email address will not be published. Required fields are marked *

error: Content is protected !!