ವಿಜಯಪುರದಲ್ಲಿ ಕರೋನಾಗೆ 3ನೇ ಬಲಿ

368

ವಿಜಯಪುರ: ರಾಜ್ಯದಲ್ಲಿ ಮಹಾಮಾರಿ ಕರೋನಾಗೆ ಮತ್ತೊಂದು ಸಾವು ಆಗಿದೆ. ಗುಮ್ಮಟನಗರಿ ವಿಜಯಪುರದಲ್ಲಿ ಇಂದು ಬೆಳ್ಳಂಬೆಳಗ್ಗೆ ಮಹಿಳೆಯೊಬ್ಬರು ಕರೋನಾದಿಂದ ಸಾವನ್ನಪ್ಪಿದ್ದಾರೆ.

ಪೆಸೆಂಟ್ ನಂಬರ್ 640ರ 62 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕರೋನಾ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 28ಕ್ಕೆ ಏರಿಕೆಯಾಗಿದೆ. ಅಸ್ತಮಾ, ಶ್ವಾಸಕೋಶ ಕಾಯಿಲೆ, ಬೊಜ್ಜು ಸೇರಿ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದ ವೃದ್ಧೆ, ಇಂದು ಬೆಳಗಿನ ಜಾವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಯಲ್ಲಿ ನಿನ್ನೆ ಕರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಇಂದು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾಹಿತಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!