ರಾಜ್ಯದಲ್ಲಿ 27 ಜನರಲ್ಲಿ ಕರೋನಾ ಪಾಸಿಟಿವ್: ಶ್ರೀರಾಮುಲು

458

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತ್ನಾಡಿದ ಅವರು, ಮತ್ತೊಬ್ಬರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ ಎಂದಿದ್ದಾರೆ. ಈ ಮೂಲಕ 27ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕರೋನಾ ನಿಯಂತ್ರಣಕ್ಕೆ 15 ಲಕ್ಷ ಮಾಸ್ಕ್ ಗಳನ್ನ, 1 ಸಾವಿರ ವೆಂಟಿಲೇಟರ್ ಹಾಗೂ 5 ಲಕ್ಷ ಪಿಪಿಇ ಕಿಟ್ ಖರೀದಿಸಲಾಗಿದೆ ಎಂದು ತಿಳಿಸಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗ್ತಿರುವುದ್ರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.




Leave a Reply

Your email address will not be published. Required fields are marked *

error: Content is protected !!